ಕೊಡಗು

ರಾಯ್ ಡಿಸೋಜ ಕೊಲೆ ಕೇಸ್; ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಕೊಡಗು : ರಾಯ್ ಡಿಸೋಜ ಅವರ ಸಾವಿನ ಪ್ರಕರಣವನ್ನು ಕೊಡಗು ಜಿಲ್ಲಾ ಕಾಂಗ್ರೇಸ್ ತೀವ್ರವಾಗಿ ಖಂಡಿಸಿದೆ. ವಿರಾಜಪೇಟೆಯಲ್ಲಿ ಶನಿವಾರ ಜಿಲ್ಲಾ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಬಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾಗಿರುವ ಪೊಲೀಸರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಈ ಸಂದರ್ಭ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಜ್ಞಾವಂತರ ಜಿಲ್ಲೆಯಾಗಿರುವ ಕೊಡಗಿನಲ್ಲಿ ಬಿಹಾರ, ಉತ್ತರ ಪ್ರದೇಶ ಮಾದರಿಯ ಘಟನೆ ನಡೆದಿರುವುದು ಅತ್ಯಂತ ವಿಷಾದಕರ. ಪೊಲೀಸರಿಂದಲೇ ಈ ಕೃತ್ಯ ನಡೆದಿದ್ದರೆ ಕ್ಷಮಿಸಲು ಸಾಧ್ಯವೇ ಇಲ್ಲವೆಂದು ಅಭಿಪ್ರಾಯಪಟ್ಟಿರುವ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ತ ಪೊಲೀಸರನ್ನು ಅಮಾನತುಗೊಳಿಸಿ ಶಿಕ್ಷೆಗೆ ಗುರಿಪಡಿಸಬೇಕು ಮತ್ತು ಮೃತ ರಾಯ್ ಡಿಸೋಜ ಅವರ ತಾಯಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗಣ್ಯರು ಆಗ್ರಹಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button