ಕೋಲಾರ

ಕೋಲಾರದಲ್ಲಿ ಕೆಎಸ್​ಆರ್​ಟಿಸಿಯಿಂದ ಕೋವಿಡ್ ನಿಯಮ ಉಲ್ಲಂಘನೆ

ಕೋಲಾರ: ಕೆಸ್ಆರ್ಟಿಸಿ ಯಿಂದ ಕೋವಿಡ್ ನಿಯಮ ಉಲ್ಲಂಘನೆ ಆಗುತ್ತಿದ್ದು, ಸಾಮಾಜಿಕ ಅಂತರವಿಲ್ಲದೆ ಪ್ರಯಾಣರನ್ನು ಕರೆದೊಯಲಾಗುತ್ತಿದೆ.

ಈ ಬಗ್ಗೆ ವಿಡಿಯೋ ವೈರಲ್ ಆಗಿದ್ದು, ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಕೋಲಾರ-ಬೆಂಗಳೂರು ಮಾರ್ಗದ ಬಸ್ ಗಳಲ್ಲಿ ನಿಯಮ ಉಲ್ಲಂಘನೆ ಆಗುತ್ತಿದ್ದು‌ ಬಸ್ ಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ.

ಈಗಾಗಲೇ ಮೊದಲನೇ ಹಾಗೂ ಎರಡನೇ ಅಲೆಯಲ್ಲಿ ಕೋಲಾರಕ್ಕೆ ಕಂಟಕವಾಗಿದ್ದ ಬೆಂಗಳೂರು ಪ್ರಯಾಣಿಕರು ಸಂಖ್ಯೆ ಈಗ ಪುನಃ ಭಯ ಬೀಳುವ ಪರಿಸ್ಥಿತಿ ಎದುರಾಗಿದೆ. ಸಾರಿಗೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button