ಜಿಲ್ಲಾ ಸುದ್ದಿ

ಕಾಡಿಗೆ ಮರಳಿದ ‘ಕುಶ’

ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನೆನ್ನೆ ಸಂಜೆ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ.

ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯದಲ್ಲಿ ಬಿಡಲು ಈ ಹಿಂದೆ ನಡೆದ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ಅಗತ್ಯ ಸಿದ್ಧತೆಗಳನ್ನು ನಡೆಸಿ ಕುಶನನ್ನು ಬಿಡಬೇಕಾದ ಪ್ರದೇಶವನ್ನು ಗುರುತಿಸಿ, ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದೆ.

ಕುಶ ಬಂಧಮುಕ್ತ ನಾಗಿದ್ದಾನೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಜೆ, ಉಪ ವಲಯ ಅರಣ್ಯಾಧಿಕಾರಿ ಕೆ ಪಿ ರಂಜನ್ ಹಾಗೂ ಅರಣ್ಯ ಪಶುವೈದ್ಯಾಧಿಕಾರಿ ಡಾಕ್ಟರ್ ವಾಸಿಂ ಮಿರ್ಜಾ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು ಕುಶ ಬಿಡುಗಡೆಯ ಸಂದರ್ಭದಲ್ಲಿ ಹಾಜರಿದ್ದು ಬೀಳ್ಕೊಟ್ಟರು.

Spread the love

Related Articles

Leave a Reply

Your email address will not be published. Required fields are marked *

Back to top button