ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗಲಿ: ಚನ್ನಬಸವ ಸ್ವಾಮೀಜಿ

ಧಾರವಾಡ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಕೂಡಲಸಂಗಮ ಬಸವಧರ್ಮ ಪೀಠದ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಯಡಿಯೂರಪ್ಪನವರ ಅವಧಿಯಲ್ಲೇ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗುವಂತೆ ಮಾಡಬೇಕು ಎಂದು ಚನ್ನಬಸವ ಸ್ವಾಮೀಜಿ ಆಗ್ರಹಿಸಿದರು. ಅಲ್ಲದೇ ವಿಧಾನ ಸೌಧದ ಮುಂದೆ ಬಸವಣ್ಣನವರ ಮೂರ್ತಿ ಸ್ಥಾಪನೆಗೆ ಯಡಿಯೂರಪ್ಪನವರು ನಿರ್ಧಾರ ಕೈಗೊಂಡಿದ್ದಕ್ಕೆ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿ ಸಿಎಂಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಕ್ತಿ ಸದನವಾದ ವಿಧಾನಸೌಧದ ಮುಂದೆ ಬಸವಣ್ಣನವರ ಮೂರ್ತಿ ಸ್ಥಾಪನೆಗೆ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಲಿಂಗಾಯತರಿಗೆ ಹರ್ಷ ತಂದಿದೆ. ಯಡಿಯೂರಪ್ಪನವರಿಗೆ ದೇವರು ಇನ್ನಷ್ಟು ಆಯುಷ್ಯ, ಆರೋಗ್ಯ ನೀಡಲಿ ಎಂದು ಸ್ವಾಮೀಜಿ ಇದೇ ಸಂದರ್ಭದಲ್ಲಿ ಹಾರೈಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button