ಜಿಲ್ಲಾ ಸುದ್ದಿ
ಕೊಲೆ ಪ್ರಕರಣ; ಆರೋಪಿ ಪೊಲೀಸ್ ವಶಕ್ಕೆ

ಉಡುಪಿ: ಯಡಮೊಗೆ ಗ್ರಾಮಸ್ಥನ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಡಮೊಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಬಂಧಿತ ಆರೋಪಿ.
ಯಡಮೊಗೆ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ರಸ್ತೆಯಲ್ಲಿ ನಿಂತಿದ್ದ ಉದಯ ಗಾಣಿಗ ಮೇಲೆ ಪ್ರಾಣೇಶ್ ಯಡಿಯಾಳ್ ಕಾರು ಚಲಾಯಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಉದಯ ಗಾಣಿಗ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದ.


ಉದಯ ಗಾಣಿಗ ಗ್ರಾಮ ಪಂಚಾಯತ್ ಅಕ್ರಮ ಬಯಲಿಗೆಳೆದಿದ್ದ ಹಿನ್ನೆಲೆಯಲ್ಲಿ ಪ್ರಾಣೇಶ್ ಯಡಿಯಾಳ್ ಮತ್ತು ಉದಯ ಗಾಣಿಗ ಮಧ್ಯೆ ವೈಯಕ್ತಿಕ ದ್ವೇಷವಿತ್ತು. ನಿನ್ನೆ ರಾತ್ರಿ ಆತನ ಮೇಲೆ ಕಾರು ಚಲಾಯಿಸಿ ಪರಾರಿಯಾಗಿದ್ದ ಪ್ರಾಣೇಶ್ ಯಡಿಯಾಳ್ ನಾಪತ್ತೆಯಾಗಿದ್ದ.
ನಿನ್ನೆ ತಡರಾತ್ರಿ ಉಳ್ಳೂರು 74 ಗ್ರಾಮ ಪಂಚಾಯತ್ ಸದಸ್ಯರ ಮನೆಯಲ್ಲಿ ಪ್ರಾಣೇಶ್ ಯಡಿಯಾಳ್ ಇದ್ದುದರ ಬಗ್ಗೆ ಮಾಹಿತಿ ಪಡೆದು ಅರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.