ಜಿಲ್ಲಾ ಸುದ್ದಿ

ಉಡುಪಿಯಲ್ಲಿ ಬ್ಲಾಕ್ ಫಂಗಸ್​ಗೆ ಮತ್ತೊಂದು ಬಲಿ

ಉಡುಪಿ: ಬ್ಲಾಕ್ ಫಂಗಸ್ ಸೋಂಕಿಗೆ ಉಡುಪಿ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ. ವಾರದ ಹಿಂದೆ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಸಮೀಪದ ಕಡೆಕಾರಿನ 55 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಮೊದಲು ಉಡುಪಿಯ 76 ವರ್ಷದ ವ್ಯಕ್ತಿಯೊಬ್ಬರು ಇದೇ ಸೋಂಕಿಗೆ ಬಲಿಯಾಗಿದ್ದರು. ಸದ್ಯ ಮಣಿಪಾಲದಲ್ಲಿ ಇಬ್ಬರು ಮತ್ತು ಜಿಲ್ಲಾಸ್ಪತ್ರೆಯಲ್ಲಿ ಓರ್ವ ರೋಗಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button