ರಾಮನಗರ
ರಾಮನಗರಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್

ರಾಮನಗರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಮನಗರ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಅವರಿಗೆ ಎರಡು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ರಾಜ್ಯ ಆಡಳಿತ ಮಂಡಳಿ ಸದಸ್ಯರಾದ ವಿ. ಬಾಲಕೃಷ್ಣ, ಕಾರ್ಯದರ್ಶಿ ಕೆ.ಎಚ್. ಚಂದ್ರಶೇಖರಯ್ಯ, ಖಜಾಂಚಿ ಎಂ. ಪರಮಶಿವಯ್ಯ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಸ್. ಶಂಕರಯ್ಯ, ಯೂತ್ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಎಸ್. ರುದ್ರೇಶ್ವರ ಇದ್ದರು.