ಜಿಲ್ಲಾ ಸುದ್ದಿ
ಮಧ್ಯಾಹ್ನ 12ರವರೆಗೂ ಅಂಗಡಿ ತೆರೆಯಲು ವರ್ತಕರಿಗೆ ಅವಕಾಶಕ್ಕೆ ಮನವಿ

ಕೊಡಗಿನಾದ್ಯಂತ ಎಲ್ಲಾ ವತ೯ಕರಿಗೂ ಲಸಿಕೆ ನೀಡಿ , 6 ರಿಂದ 12 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
ಮಳೆಗಾಲ ಸಮೀಪಿಸುತ್ತಿರುವುದರಿಂದ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ಎಲ್ಲಾ ರೀತಿಯ ವ್ಯಾಪಾರಸ್ಥರಿಗೆ ನುಕೂಲವಾಗುವಂತೆ ಅಂಗಡಿ ಮುಂಗಟ್ಟು ತೆರೆಯಲು ಅನುವು ಮಾಡಬೇಕೆಂದು ಚೇಂಬರ್ ಆಫ್ ಕಾಮಸ್೯ ಮನವಿ ಮಾಡಿದೆ.
ಕೋವಿಡ್-19ಗೆ ಸಂಬಂಧಿಸಿದಂತೆ ನಿಯಮಾವಳಿ ಜಾರಿಗೊಳಿಸುವ ಸಂಬಂಧ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾದ ಪ್ರತೀ ಸಭೆಗೆ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳನ್ನು ಕರೆದು ಚರ್ಚೆ ನಡೆಸಿ ಅಭಿಪ್ರಾಯ ಪಡೆಯುವ ಕ್ರಮ ಜಾರಿಯಲ್ಲಿತ್ತು. ಆದರೆ ಈ ಬಾರಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಬಗ್ಗೆ ಗಮನಹರಿಸಬೇಕಾಗಿ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಎಂ.ಬಿ. ದೇವಯ್ಯ ಮತ್ತು ಪ್ರಧಾನ ಕಾಯ೯ದಶಿ೯ ನವೀನ್ ಅಂಬೇಕಲ್ ಜಿಲ್ಲಾಧಿಕಾರಿಗಳಿಗೆ ಮನವಿ ಮೂಲಕ ಒತ್ತಾಯಿಸಿದ್ದಾರೆ.