ಶಿವಮೊಗ್ಗ

ಶಿವಮೊಗ್ಗ: ಕೊರೋನಾ ಜೊತೆಗೆ ಡೆಂಗ್ಯೂ ಭೀತಿ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನಾ ಆತಂಕದ ನಡುವೆ ಡೆಂಗ್ಯೂ ಭೀತಿ ಎದುರಾಗಿದೆ. ಸಾಗರದಲ್ಲಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸೂಚಿಸಿದ್ದಾರೆ.

ಡೆಂಗ್ಯೂ ನಿಯಂತ್ರಣ ಸಂಬಂಧ ಸಾಗರ ನಗರಸಭೆ ರಂಗಮಂದಿರ ಆವರಣದಲ್ಲಿ ಶಾಸಕ ಹರತಾಳು ಹಾಲಪ್ಪ ಅಧಿಕಾರಿಗಳ ಸಭೆ
ನಡೆಸಿದರು. ತಕ್ಷಣದಿಂದ ಡೆಂಗ್ಯೂ ನಿಯಂತ್ರಣ ಮತ್ತು ಜಾಗೃತಿ ಕಾರ್ಯ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ,ಶಾಸಕ ಹರತಾಳು ಹಾಲಪ್ಪ, “ತಾಲೂಕಿನಲ್ಲಿ ಕಳೆದ ತಿಂಗಳು 10 ಡೆಂಗ್ಯೂ ಪ್ರಕರಣ ಪತ್ತೆಯಾಗಿತ್ತು.ಜೂನ್‌ ತಿಂಗಳಲ್ಲಿ ಈಗಾಗಲೇ ೨೪ ಕೇಸ್‌ಗಳು ಪತ್ತೆಯಾಗಿವೆ. ಹಲವರು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಪ್ರಕರಣಗಳ ನಿಖರ ಮಾಹಿತಿ ತಿಳಿಯುತ್ತಿಲ್ಲ. ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಿಂದಲೂ ಡೆಂಗ್ಯೂ ಪ್ರಕರಣಕ್ಕೆ ಚಿಕಿತ್ಸೆ ಪಡೆದವರ ವಿವರ ಸಂಗ್ರಹಿಸಬೇಕು. ಸ್ಥಳೀಯ ಆಡಳಿತದ ಜೊತೆಗೆ ಆರೋಗ್ಯ ಇಲಾಖೆ ಕೈಜೋಡಿಸಿ, ಡೆಂಗ್ಯೂ ಕುರಿತು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು” ಎಂದರು.

ಒಂದೇ ವ್ಯಕ್ತಿಗೆ ಡೆಂಗ್ಯೂ, ಕೊರೋನಾ ಸೋಂಕು

24 ಪ್ರಕರಣಗಳಲ್ಲಿ ಇಬ್ಬರಿಗೆ ಡೆಂಗ್ಯೂ ಜೊತೆಗೆ ಕೋವಿಡ್‌ ದೃಢಪಟ್ಟಿದೆ ಎಂದು ಸಿವಿಲ್‌ ಸರ್ಜನ್‌ ಡಾ.ಪ್ರಕಾಶ್‌ ಬೋಸ್ಲೆ ಸಭೆಯಲ್ಲಿ ಮಾಹಿತಿ ನೀಡಿದರು. ಗಾಂಧಿನಗರ,ವಿನೋಬನಗರ, ಎಸ್‌.ಎನ್‌.ನಗರ,ಸೂರನಗದ್ದೆ, ಸೊರಬ ತಾಲೂಕಿನ ಕ್ಯಾಸನೂರು ಸೇರಿದಂತೆ ಇನ್ನಿತರ ಭಾಗದಲ್ಲಿ ಡೆಂಗ್ಯೂ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.ಡೆಂಗ್ಯೂಗೆ ಸಕಾಲದಲ್ಲಿ ಚಿಕಿತ್ಸೆ ಲಭ್ಯವಿದೆ. ಜನರು ಭೀತಿಗೊಳ್ಳುವ ಆತಂಕವಿಲ್ಲ.ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು ಎಂದರು.

ಸಾಗರ ಪಟ್ಟಣದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ.ಫಾಗಿಂಗ್‌ ಮಾಡುವುದು ಕ್ಯಾನ್ಸರ್‌ ಕಾರಕ ಎಂದು ಸುಪ್ರೀಂಕೋರ್ಟ್‌
ಹೇಳಿದೆ.ಹಾಗಾಗಿ ಫಾಗಿಂಗ್‌ ಬದಲು ಮೆಲಾಥಿಯಾನ್‌ ದ್ರಾವಣ ಸಿಂಪಡಣೆ ಮಾಡಲಾಗುತ್ತದೆ.ಅಲ್ಲದೆ ಜಾಗೃತಿಯನ್ನೂ ಮೂಡಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಹೆಚ್‌. ಕೆ.ನಾಗಪ್ಪ ಸಭೆಗೆ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button