ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಎಸ್ಎಸ್ಎಲ್ಸಿ ಪರೀಕ್ಷೆ: ಬಿಎಸ್ವೈ

ಬೆಳಗಾವಿ: ಪರಿಸ್ಥಿತಿ ಸುಧಾರಣೆ ಆದರೆ ಮಾತ್ರವೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲದೇ ಇದ್ದರೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ ಸಮರ್ಥ ಐಎಎಸ್ ಅಧಿಕಾರಿ ನೇಮಕ ಮಾಡುತ್ತೇವೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಕೋವಿಡ್ ಸೇರಿ ಇತರೆ ವಿಚಾರಗಳ ಕುರಿತು ಚರ್ಚಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಭಾಗಿಯಾಗಲು ಆಗಮಿಸುವ ಮುನ್ನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ ಈಗಾಗಲೇ ಡಿಸಿಎಂ ಲಕ್ಷ್ಮಣ್ ಸವದಿ ಬೀನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ
ಈ ಬಗ್ಗೆ ಚರ್ಚಿಸಿದ್ದು ಶೀಘ್ರವೇ ಐಎಎಸ್ ಅಧಿಕಾರಿಯನ್ನು ನೇಮಿಸಿ ಅವ್ಯವಸ್ಥೆ ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು
ರೈತರಿಗೆ ಕೊಡಬೇಕಾಗಿರುವ ಬಾಕಿ ಬಿಲ್ ಆದಷ್ಟು ಬೇಗ ಕೊಡಿಸಲು ಯತ್ನಿಸಲಾಗುತ್ತದೆ ಎಂದು ಇದೇ ವೇಳೆ ಸಿಎಂ ತಿಳಿಸಿದರು.