ಉಡುಪಿ

ತೈಲ ಬೆಲೆ ಏರಿಕೆ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಕಾಂಗ್ರೆಸ್ನಿಂದ ಪ್ರತಿಭಟನೆ ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದ್ದು ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲೂ ಕೇಂದ್ರ ,ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆದಿದೆ ಸತತ ಬೆಲೆ ಏರಿಸುವ ಮೂಲಕ ಜನರ ಬದುಕಿನ ಮೇರೆ ಬರೆ ಎಳೆದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದರು.

ಯುಪಿಎ ಸರಕಾರ ಇದ್ದಾಗ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಈಗ ಇಂಧನ ,ದಿನಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆಗೆ ಮೌನ ವಹಿಸಿದ್ದು ಯಾಕೆ ಎಂದು ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ ಮಾಡಿದ್ದಾರೆ. ಸಾಮಾಜಿಕ ಅಂತರ ಕಾಪಾಡಿ ಮಾಸ್ಕ್ ಧರಿಸಿ ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಜನರಿಗೆ ಜಾಗ್ರತೆ ಮೂಡಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಿತ ಜಿಲ್ಲಾ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button