ಜಿಲ್ಲಾ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಆರೋಪಿ ಬಂಧಿಸುವಂತೆ ಉಮಾಶ್ರೀ ಆಗ್ರಹ

ಬಾಗಲಕೋಟೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಡಿಎನ್ಎ ಟೆಸ್ಟ್ ಆಗಲೇಬೇಕು ಎಂದು ಕಾನೂನಿನಲ್ಲಿದೆ. ಯಾಕೆ ಅದು ಆಗಲಿಲ್ಲ? ತಮ್ಮ ಆರೋಪಿ ಅದರಲ್ಲಿ ಸಿಲುಕಿಕೊಂಡರೆ ಎನ್ನುವ ಆತಂಕ ಸರಕಾರಕ್ಕಿದೆಯ ಎಂದು ಮಾಜಿ ಸಚಿವೆ ಉಮಾಶ್ರೀ ಪ್ರಶ್ನಿಸಿದ್ದಾರೆ.
ಉನ್ನತ ಹುದ್ದೆಯಲ್ಲಿದ್ದವರು ಇಂತಹ ದೊಡ್ಡ ಅನ್ಯಾಯವನ್ನು ಮಾಡಿದ್ದಾರೆ ಎಂದು ಪದೇ ಪದೇ ಮಹಿಳೆ ಹೇಳಿದರೂ ಅವರ ರಕ್ಷಣೆಗೆ ನೀವು ಬರದೇ ವ್ಯಕ್ತಿಯನ್ನು ರಕ್ಷಣೆ ಮಾಡುತ್ತೀದ್ದೀರಿ ಎನ್ನುವುದು ಸ್ಪಷ್ಟವಾಗಿದೆ ಎಂದು ಬನಹಟ್ಟಿಯಲ್ಲಿ ಮಾಜಿ ಸಚಿವೆ ಉಮಾಶ್ರೀ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಶೀಘ್ರವೇ ಬಂಧಿಸಬೇಕು.ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.