ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಅಬ್ಬರದ ಮಳೆ; ಶಿರಸಿಯಲ್ಲಿ ಭೂ ಕುಸಿತ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಗೆ ಶಿರಸಿ ತಾಲೂಕಿನ ಜಾಜಿ ಗುಡ್ಡದಲ್ಲಿ ಭೂ ಕುಸಿತ ಉಂಟಾಗಿದೆ.ಈ ಗ್ರಾಮದ ಏಳುಮನೆಗಳ ಜನರನ್ನು ಸ್ಥಳಾಂತರಿಸಲು ಶಿರಸಿ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಆದೇಶ ನೀಡಿದ್ದಾರೆ.
ಇನ್ನು ಶಿರಸಿಯ ಹುಣಸೆ ಕೊಪ್ಪದಲ್ಲೂ ಭೂ ಕುಸಿತದಿಂದ ನಿನ್ನೆ ದಿನ ಮಂಜುನಾಥ್ ಗಣಪ ಗೌಡ ಎಂಬುವವರು ಮೃತಪಟ್ಟಿದ್ದರು.
ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಮುಂದುವರೆ ದಿದ್ದು,ಈ ತಿಂಗಳ 18 ರ ವರೆಗೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ.ಹವಾಮಾನ ಇಲಾಖೆ ಮಾಹಿತಿಯಂತೆ ಜಿಲ್ಲೆಯಲ್ಲಿ ಅಬ್ಬರದ ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರೆಯುವ ಸೂಚನೆ ನೀಡಿದ್ದಾರೆ.