ಉತ್ತರ ಕನ್ನಡ

ಮಹಾರಾಷ್ಟ್ರದಿಂದ ಉತ್ತರಕನ್ನಡಕ್ಕೆ ಬರುವವರ ಕೈಗೆ ಸೀಲ್

ಕಾರವಾರ : ಕೊರೋನಾ ನಂತರದಲ್ಲಿ ಇದೀಗ ಡೆಲ್ಟಾ ವೈರಸ್ ಬಗ್ಗೆ ಭೀತಿ ಪ್ರಾರಂಭವಾಗಿದ್ದು, ಉತ್ತರ ಕನ್ನಡದ ಜಿಲ್ಲಾಡಳಿತ ಈ ವೈರಸ್ ತಡೆಗೆ ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಕೈಗೆ ಸೀಲ್ ಹಾಕುವುದು, ಕ್ವಾರಂಟೈನ್ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಮಾಡಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಡೆಲ್ಟಾ ವೈರಸ್ ಸೋಂಕಿನ ಮಾದರಿ ಪತ್ತೆಯಾಗಿಲ್ಲ.ಮಹಾರಾಷ್ಟ್ರದಲ್ಲಿ ಕಂಡು ಬಂದಿರುವುದು ತಿಳಿದಿದೆ. ಜಿಲ್ಲೆಯಲ್ಲಿ ರೈಲ್ವೆ ಸ್ಟೇಷನ್ ಹಾಗೂ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿಯೇ ಒಳಗೆ ಬಿಡುತ್ತಿದ್ದು, ಡೆಲ್ಟಾ ಪ್ಲಸ್ ವೈರಸ್ ಹರಡದಂತೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಹದಿನೈದು ದಿನಕ್ಕೊಮ್ಮೆ ವಿವಿಧ ವಿಭಾಗದಲ್ಲಿ ಇರುವ ಸೋಂಕಿತರ ಗಂಟಲು ದ್ರವದ ಪರೀಕ್ಷೆಯನ್ನು ಬೆಂಗಳೂರಿಗೆ ಕಳಿಸಲಾಗುತ್ತಿದೆ.ಲಸಿಕೆ ತೆಗೆದುಕೊಂಡ ನಂತರವೂ,ಕೊರೋನಾ ಧೃಡಪಟ್ಟಿದ್ದರೆ ಅವರಿಗೆ ಕೋವಿಡ್ ರೂಪಾಂತರ ವೈರಸ್ ಲಕ್ಷಣ ಇದೆಯೇ,ಎರಡನೇ ಬಾರಿಗೆ ಸೋಂಕು ದೃಢಪಟ್ಟರೆ ಅವರಲ್ಲಿ ಬೇರೆ ವೈರಸ್ ಕಂಡು ಬಂದಿದೆಯೇ ಎನ್ನುವುದನ್ನು ತಿಳಿಯುವ ನಿಟ್ಟಿನಲ್ಲಿ ಕಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಅಂತರ ಜಿಲ್ಲೆ,ರಾಜ್ಯ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ.ಆದರೆ ಜಿಲ್ಲಾಡಳಿತ ರೈಲ್ವೆ ನಿಲ್ದಾಣ ಹಾಗೂ ಚೆಕ್ ಪೋಸ್ಟ್ ನಲ್ಲಿ ನಿಗಾ ಇಡಲಾಗಿದೆ ಎಂದು ಅವರು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button