ಜಿಲ್ಲಾ ಸುದ್ದಿ
ಲಸಿಕೆ ನೀಡುವಲ್ಲಿ ಸರ್ಕಾರ ವಿಫಲ; ಕಾಂಗ್ರೆಸ್ನಿಂದ ರಾಷ್ಟ್ರಪತಿಗೆ ಪತ್ರ

ಚಿಕ್ಕಮಗಳೂರು: ಕೋವಿಡ್ ನಿಯಂತ್ರಣಕ್ಕೆ ಲಸಿಕೆ ನೀಡುವಲ್ಲಿ ಕೇಂದ್ರ ಸರ್ಕಾರದ ಅಸಮರ್ಪಕ ನೀತಿಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ರಾಷ್ಟ್ರಪತಿಗಳಿಗೆ ಮನವಿಪತ್ರ ಬರೆದು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ರಮೇಶ್ಗೆ ಮನವಿ ಸಲ್ಲಿಸಿ, ಜನರಿಗೆ ಸಮರ್ಪಕ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.
ಬ್ಯಾರಿ ಅಕಾಡೆಮಿ ಅಧ್ಯಕ್ಷ ಕೆ.ಅಹಮದ್, ಅರಣ್ಯ ವಿಹಾರಧಾಮ ನಿಗಮ ಮಾಜಿ ಅಧ್ಯಕ್ಷ ಏ.ಏನ್.ಮಹೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ಸೈಯದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಇದ್ದರು.