ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕಾರವಾರ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಪಂಚಾಯತ್ ಆಡಳಿತಾಧಿಕಾರಿ ಕೆ.ಪಿ.ಮೋಹನರಾಜ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯತದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್ – 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ,ತಾಲೂಕು ಮತ್ತು ಗ್ರಾಮಪಂಚಾಯತಿ ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಪಡೆದುಕೊಂಡ ಕಾರ್ಯದರ್ಶಿ ಗಳು ಆಶಾ ಕಾರ್ಯಕರ್ತೆ ಯರಿಗೆ ಸುರಕ್ಷತಾ ದೃಷ್ಟಿಯಿಂದ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.15 ನೇ ಹಣಕಾಸು,ಅನಿರ್ಬಂಧಿತ ಅನುದಾನ ಹಾಗೂ 2021 – 22 ಸಾಲಿನ ಜಿಲ್ಲಾಪಂಚಾಯತದ ಆಯವ್ಯಯ ಕುರಿತು ಕ್ರಿಯಾ ಯೋಜನೆ ಬಗ್ಗೆ ವಿಸ್ತ್ರತವಾಗಿ ಚರ್ಚಿಸಿದರು.ಅಲ್ಲದೇ ಸ್ವಚ್ಛ ಭಾರತ ಮಿಷನ್,ಜಲ ಜೇವನ ಮಿಷನ್,ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಳ್ಳಲಾದ ಕಾಮಗಾರಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗ.ಎಮ್ ರವರು ವಿವಿಧ ಯೋಜನೆಗಳ ಹಾಗೂ ಕೋವಿಡ್ – 19 ಸಂಬಂಧಿಸಿದಂತೆ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ವಿವರಣೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ನಾಗೇಶ ರಾಯ್ಕರ್,
ಮುಖ್ಯ ಲೆಕ್ಕಾಧಿಕಾರಿ ಡಾ.ಸಂಗೀತಾ ಭಟ್,ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್,ಉಪ ಕಾರ್ಯದರ್ಶಿ (ಅಭಿವೃದ್ಧಿ) ಎನ್.ಜಿ.ನಾಯಕ, ಯೋಜನಾ ನಿರ್ದೇಶಕ ಕರೀಮ್ ಅಸಾದಿ ಸೇರಿದಂತೆ ಜಿಲ್ಲಾ ಪಂಚಾಯತ್ ದ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.