ಆರೋಗ್ಯಆಹಾರಲೈಫ್ ಸ್ಟೈಲ್

ಏಲಕ್ಕಿ ಬೆರೆಸಿದ ಹಾಲನ್ನು ಕುಡಿಯುವುದರಿಂದ ಈ ಆರೋಗ್ಯ ಪ್ರಯೋಜನವನ್ನು ಪಡೆಯಿರಿ

– ಪವಿತ್ರಾ

ಹಾಲು ಅನೇಕ ಪೋಷಕಾಂಶಗಳನ್ನು ಹೊಂದಿದೆ. ಅದನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ರೋಗಗಳನ್ನು ಸುಲಭವಾಗಿ ತೆಗೆದುಹಾಕಬಹುದು. ಹಾಗೇ ಏಲಕ್ಕಿಯಲ್ಲಿಯೂ ಕೂಡ ಅನೇಕ ಪೋಷಕಾಂಶಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಏಲಕ್ಕಿ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಸೇವಿಸುವುದರಿಂದ ಈ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ, ಕೆಮ್ಮು ನಿವಾರಿಸಲು ಏಲಕ್ಕಿ ಹಾಲು ತುಂಬಾ ಸಹಕಾರಿ. ಹಾಲು ಮತ್ತು ಏಲಕ್ಕಿಯಲ್ಲಿರುವ ಆ್ಯಂಟಿ ವೈರಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಶೀತ ಮತ್ತು ಕಫದ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ. ಹಾಗಾಗಿ ಏಲಕ್ಕಿ ಮಿಶ್ರಿತ ಹಾಲನ್ನು ಕುಡಿದರೆ ಶೀತ, ಕಫದ ಸಮಸ್ಯೆ ಹತ್ತಿರವೂ ಸುಳಿಯಲ್ಲ.

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಳ ಒಂದು ಒಂದು ಸಾಮಾನ್ಯ ಸಮಸ್ಯೆಯಾಗಿದೆ. ತೂಕ ಹೆಚ್ಚಳದಿಂದ ಹಲವಾರು ಸಮಸ್ಯೆಗಳು ಎದುರಾಗುತ್ತಿದೆ. ಹಾಗಾಗಿ ತೂಕವನ್ನು ಇಳಿಸಿಕೊಳ್ಳಲು ಹಲವರು ಹರಸಾಹಸ ಮಾಡುತ್ತಿದ್ದಾರೆ. ಅಂತವರು ಹಾಲಿನೊಂದಿಗೆ ಏಲಕ್ಕಿ ಪುಡಿಯನ್ನು ಮಿಕ್ಸ್ ಮಾಡಿ ಸೇವಿಸಿದರೆ ತೂಕ ಕಡಿಮೆಯಾಗುತ್ತದೆ.

ಕೆಟ್ಟ ಆಹಾರದಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲ ಅನಿಲದ ಸಮಸ್ಯೆಯು ಕಾಡುತ್ತದೆ. ಹಾಗಾಗಿ ಏಲಕ್ಕಿ ಹಾಲು ಅನಿಲದ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೇ ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಅತಿಸಾರದ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮಳೆಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆ ಗಳು ಕಂಡುಬರುತ್ತದೆ. ಇದಕ್ಕೆ ಏಲಕ್ಕಿ ಹಾಲು ಬಹಳ ಸಹಕಾರಿಯಾಗಿದೆ. ಅಲ್ಲದೇ ಇದು ಚರ್ಮದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದು ಚರ್ಮದ ಹೊಳಪಿಗೆ ಕಾರಣವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button