ಆರೋಗ್ಯಲೈಫ್ ಸ್ಟೈಲ್

ಅಡುಗೆ ಮನೆಯಲ್ಲಿರುವ ಈ ಮಸಾಲೆಗಳು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಕಾರಿ

– ಪವಿತ್ರಾ

ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತಿದೆ. ಈ ರೋಗದಿಂದ ರಕ್ಷಿಸಿಕೊಳ್ಳಲು ಜನರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಅದರ ಜೊತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳಲು ಬ್ಯಾಕ್ಟೀರಿಯಾ ವಿರೋಧಿ ಆಹಾರಗಳನ್ನು ಸೇವಿಸುವುದು ಅಗತ್ಯ. ಹಾಗಾಗಿ ನಿಮ್ಮ ಮನೆಯ ಅಡುಗೆ ಮನೆಯಲ್ಲಿಯೇ ಸಿಗುವಂತಹ ಈ ಆ್ಯಂಟಿ ಬ್ಯಾಕ್ಟೀರಿಯಲ್ ಆಹಾರಗಳನ್ನು ಸೇವಿಸಿ.

ಕರಿಮೆಣಸು: ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದ್ದು, ರೋಗ ನಿರೋಧ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ದಿನಕ್ಕೆ 4 ಗ್ರಾಂನಷ್ಟು ಕರಿಮೆಣಸನ್ನು ಸೇವಿಸಿ. ಆದರೆ ಅತಿಯಾಗಿ ಸೇವಿಸಿದರೆ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ.

ಅರಿಶಿನ: ಅರಿಶಿನದಲ್ಲಿ ಕಂಡುಬರುವ ಕರ್ಕ್ಯುಮಿನ್ ಆ್ಯಂಟಿ ವೈರಲ್ ಮತ್ತು ಉರಿಯೂತದ ಗುಣಗಳನ್ನು ಹೊಂದಿದೆ. ಇದು ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಹಾಗಾಗಿ ಅರಿಶಿನವನ್ನು ಹಾಲು ಅಥವಾ ನೀರಿನಲ್ಲಿ ಮಿಕ್ಸ್ ಮಾಡಿ ಕುಡಿಯಿರಿ.

ಶುಂಠಿ: ಶುಂಠಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣ ಅಧಿಕವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗಗಳ ವಿರುದ್ಧ ಹೋರಾಡುತ್ತದೆ. ಮತ್ತು ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ.

ಬೆಳ್ಳುಳ್ಳಿ : ಬೆಳ್ಳುಳ್ಳಿಯಲ್ಲಿ ಕೂಡ ಆ್ಯಂಟಿ ಮೈಕ್ರೊಬಿಯಲ್ ಗುಣಗಳಿವೆ. ಇದು ರೋಗಗಳ ವಿರುದ್ದ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ. ಇದು ಶ್ವಾಸಕೋಶವನ್ನು ಬ್ಯಾಕ್ಟೀರಿಯಗಳಿಂದ ರಕ್ಷಿಸುತ್ತದೆ. ಹಾಗಾಗಿ ಬೆಳ್ಳುಳ್ಳಿಯನ್ನು ನೀರಿನಲ್ಲಿ ಕುದಿಸಿ ಸೇವಿಸಿ.
ಶುಂಠಿ, ಬೆಳ್ಳುಳ್ಳಿ, ಅರಿಶಿನ, ಕಾಳುಮೆಣಸು,

Spread the love

Related Articles

Leave a Reply

Your email address will not be published. Required fields are marked *

Back to top button