ರಾಷ್ಟ್ರೀಯ

ಪುಣೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 18 ಮಂದಿ ಸಾವು

ಪುಣೆ: ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿ ಕನಿಷ್ಠ 18 ಮಂದಿ ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯಿಂದ 40 ಕಿಲೋ ಮೀಟರ್ ದೂರದ ಉರವಾಡೆ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಎಸ್‌ವಿಎಸ್ ಅಕ್ವಾ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಖಾನೆಯಲ್ಲಿ ಈ ಅನಾಹುತ ಸಂಭವಿಸಿದೆ.

ಪುಣೆಯ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ದೇಶ್​ಮುಖ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸುಮಾರು 15 ಮಂದಿ ಕಾರ್ಮಿಕರು ಕಾರ್ಖಾನೆಯ ಒಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದಿದ್ದಾರೆ. ಈವರೆಗೂ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂಬುದು ಸದ್ಯದ ಮಾಹಿತಿ.

ನೀರು ಶುದ್ಧೀಕರಿಸಲು ಕ್ಲೋರಿನ್ ಡೈಯಾಕ್ಸೈಡ್ ಟ್ಯಾಬ್‌ಗಳನ್ನು ಈ ಕಂಪನಿ ಉತ್ಪಾದಿಸುತ್ತಿತ್ತು.

ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ತಲುಪಿದ್ದು ಕಾರ್ಯಾಚರಣೆ ನಡೆಸಲಾಗುತ್ತಿದೆ. 8 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ.

Spread the love

Related Articles

Leave a Reply

Your email address will not be published. Required fields are marked *

Back to top button