ರಾಷ್ಟ್ರೀಯ

ನಂದಿಗ್ರಾಮದಲ್ಲಿ ಸೋಲು; ಮಮತಾ ತಕರಾರು ಅರ್ಜಿ ವಿಚಾರಣೆ

ಕೋಲ್ಕತಾ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ತಮಗೆ ಸೋಲಾದುದರ ಸಂಬಂಧ ಮಮತಾ ಬ್ಯಾನರ್ಜಿ ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಇಂದು ಕೋಲ್ಕತಾ ಹೈಕೋರ್ಟ್​ನಲ್ಲಿ ನಡೆಯಲಿದೆ.

ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ, ಮಮತಾ ಅವರ ಒಂದು ಕಾಲದ ಆಪ್ತರಾಗಿದ್ದ ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಮಮತಾ ವಿರುದ್ಧ ಜಯ ಗಳಿಸಿದ್ದರು. ಈ ಬಗ್ಗೆ ಮಮತಾ ಇವಿಎಂಗಳ ದುರ್ಬಳಕೆಯಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದರು. ಮರು ಎಣಿಕೆ ಆಗಬೇಕೆಂಬ ತಮ್ಮ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಮಮತಾ ಅವರ ತಕರಾರುಅರ್ಜಿಯನ್ನು ನ್ಯಾಯಮೂರ್ತಿ ಕೌಶ್ಇಕ ಚಂದ ಅವರು ಇರುವ ನ್ಯಾಯಪೀಠ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button