ರಾಷ್ಟ್ರೀಯ

ಪತ್ರಕರ್ತ ವಿನೋದ್ ದುವಾ ವಿರುದ್ಧದ ದೇಶದ್ರೋಹ ಕೇಸ್ ರದ್ದುಪಡಿಸಿದ ಸುಪ್ರೀಂ ಕೋರ್ಟ್

ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಕಾರತಣಕ್ಕಾಗಿ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹ ಪ್ರಕರಣ ದಾಖಲಿಸಲಾಗದು ಎಂಬ ಸುಪ್ರೀಂ ಕೋರ್ಟ್​ನ 1962ರ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಈ ತೀರ್ಪು ಎಲ್ಲ ಪತ್ರಕರ್ತರಿಗೂ ಇಂಥ ಪ್ರಕರಣಗಳಿಂದ ರಕ್ಷಣೆಯೊದಗಿಸಿದೆ ಎಂದು ಅಭಿಪ್ರಾಯಪಟ್ಟಿತು.

ಸರ್ಕಾರದ ಕಾರ್ಯಕ್ರಮಗಳನ್ನು ಟೀಕಿಸಿದ್ದಕ್ಕಾಗಿ ನಾಗರಿಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ ಎಂದು ಆ ತೀರ್ಪಿನಲ್ಲಿ ನ್ಯಾಯಾಲಯ ಹೇಳಿತ್ತು.

ಪತ್ರಕರ್ತ ವಿನೋದ್ ದುವಾ ಕಳೆದ ವರ್ಷ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಬಿಜೆಪಿ ಮುಖಂಡರೊಬ್ಬರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button