ರಾಜ್ಯ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ; ಏ. 1ರಿಂದಲೇ ಪೂರ್ವಾನ್ವಯ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಇದು ಪೆಟ್ರೋಲ್, ಡೀಸೆಲ್ ಬೆಲೆಯಿಂದ ಕಂಗೆಟ್ಟಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.
ವಿದ್ಯುಚ್ಛಕ್ತಿ ಸರಬರಾಜು ದರದಲ್ಲಿ ಶೇಕಡ 3.84 ರಷ್ಟು ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿ 35 ಪೈಸೆ ಹೆಚ್ಚಳಕ್ಕೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, 30 ಪೈಸೆ ದರ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿದೆ.
ಗ್ಯಾಸ್ ಸಿಲಿಂಡರ್ ಬೆಲೆ, ಅಡುಗೆ ಎಣ್ಣೆ ಬೆಲೆ, ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಇದು ಮತ್ತೊಂದು ಆಘಾತವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಜನರಿಗೆ ಒಪ್ಪೊತ್ತಿನ ಊಟಕ್ಕೆ ಪರದಾಟ ನಡೆಸುವಂತಾಗಿದೆ. ಈ ಮಧ್ಯೆ ಸರಕಾರದ ಈ ನಿಲುವು ಜನರ ಆಕ್ರೋಶಕ್ಕೆ ಕಾರಣವಾಗಿದೆ.