ರಾಜ್ಯ
ಪಿಯುಸಿ ಪರೀಕ್ಷೆಯೂ ರದ್ದು?

ಕೇಂದ್ರೀಯ ಪಠ್ಯಕ್ರಮ ಸಿಬಿಎಸ್ಸಿ 12ನೇ ತರಗತಿ ಪರೀಕ್ಷೆಗಳು ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಿಯುಸಿ ಪರೀಕ್ಷೆಯೂ ರದ್ದಾಗುವ ಸಾಧ್ಯತೆಯಿದೆ.
ಈ ಬಗ್ಗೆ ಪರಿಸ್ಥಿತಿಯನ್ನು ಅರಿತು ಶೀಘ್ರವೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್-19 ಸಂಕಷ್ಟದಿಂದಾಗಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ದೃಷ್ಟಿಯಿಂದ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತಂತೆ ವ್ಯಕ್ತವಾಗಿರುವ ಅಭಿಪ್ರಾಯಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Let them postpone the exams to July or August.
Why cancel?
Last year also they postponed and conducted.
Students lose interest in studies if get cancelled.