ರಾಜ್ಯ
ಹೈಕಮಾಂಡ್ ಬಯಸಿದರೆ ರಾಜೀನಾಮೆಗೆ ಸಿದ್ಧ: ಬಿಎಸ್ವೈ

ಬೆಂಗಳೂರು: ಯಾವಾಗ ರಾಜೀನಾಮೆ ಕೊಡಲು ಹೇಳಿದರೂ ರಾಜೀನಾಮೆ ಕೊಟ್ಟು ಹೋಗಲು ಸಿದ್ಧ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎದ್ದಿದ್ದ ಊಹಾಪೋಹಗಳ ವಿಚಾರದಲ್ಲಿ ಯಡಿಯೂರಪ್ಪ ಖಡಕ್ ಪ್ರತಿಕ್ರಿಯೆ ನೀಡಿದಂತಾಗಿದೆ.
ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಅದು ವಿಶ್ವಾಸ ಇಡುವವರೆಗೂ ಈ ಸ್ಥಾನದಲ್ಲಿರುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪಲಾರೆ ಎಂದೂ ಈ ಸಂದರ್ಭದಲ್ಲಿ ಯಡಿಯೂರಪ್ಪ ಹೇಳಿರುವುದು ವಿಶೇಷ.