ಮೋದಿ ರೋಡ್ ಶೋ ವೇಳೆ ಹೂ ಜೊತೆ ಮೊಬೈಲ್ ಎಸೆದ ಅಭಿಮಾನಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ವೇಳೆ ಅಭಿಮಾನಿಯೊಬ್ಬರು ಹೂವಿನ ಜೊತೆಗೆ ಮೊಬೈಲ್ (Mobile) ಎಸೆದ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಮೈಸೂರಿನಲ್ಲಿ ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆ ನಡೆದಿದೆ. ಆದರೆ ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿದ್ದಿದ್ದು, ಯಾವುದೇ ತೊಂದರೆ ಸಂಭವಿಸಿಲ್ಲ.