ಈ ಕ್ಷಣ :

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್​ನಲ್ಲಿ 3 ಸಾವಿರ ಕೋಟಿ ಅನುದಾನ: ಸಿಎಂ ಬೊಮ್ಮಾಯಿ

Published 16 ಮಾರ್ಚ್ 2023, 12:42 IST
Last Updated 5 ಮೇ 2023, 15:33 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN:

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್​ನಲ್ಲಿ 3 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಲಾಗುವುದು, ಕಿತ್ತೂರು ಕರ್ನಾಟಕದ ಅಭಿವೃದ್ಧಿ ಹಾಗೂ ಹಳೆಯ ಮೈಸೂರು ಭಾಗದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಆಯೋಜಿಸಿದ್ದ 66 ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಮತ್ತು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಸರ್ಕಾರ ಕೆಲಸ ಮಾಡಲಿದೆ. ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಜನೋತ್ಸವವಾಗಬೇಕು. ಇಡೀ ರಾಜ್ಯದ ಅಭಿವೃದ್ಧಿ ಸಾಧ್ಯವಾದರೆ ಜನೋತ್ಸವ ಕಾಣಬಹುದು. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದರು.

ಕನ್ನಡವನ್ನು ಎಲ್ಲಾ ಆಯಾಮಗಳಲ್ಲಿ ಬಳಕೆ ಮಾಡುವ ಮೂಲಕ ಕನ್ನಡಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ ಎಂದ ಅವರು ಈ ನಿಟ್ಟಿನಲ್ಲಿ ಇಂಜಿನಿಯರಿಂಗ್ ನಂತಹ ತಾಂತ್ರಿಕ ಶಿಕ್ಷಣವನ್ನು ಸಂಪೂರ್ಣ ಕನ್ನಡದಲ್ಲೇ ನೀಡಲು ಸರ್ಕಾರ ಮುಂದಡಿ ಇಟ್ಟಿದೆ. ಈ ವಿಷಯದಲ್ಲಿ ಸರ್ಕಾರ ನಿಲುವು ಹೊಂದಿದೆ ಎಂದು ಹೇಳಿದರು.

ಕನ್ನಡಕ್ಕೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಅದನ್ನು ಕುಗ್ಗಿಸಲು ಅಥವಾ ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಸಿಂಧೂ ನಾಗರಿಕತೆಗೂ ಮೊದಲೇ ಕನ್ನಡ ಬಳಕೆಯಲ್ಲಿದ್ದ ಭಾಷೆ. ಸಹಸ್ರಾರು ವರ್ಷಗಳಿಂದ ಬಳಕೆಯಲ್ಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕನ್ನಡಿಗರ ಮಕ್ಕಳಿಗೆ ಉದ್ಯೋಗ ನೀಡುವ ಶಕ್ತಿ ತುಂಬಬೇಕಿದೆ ಆಗ ಮಾತ್ರ ಕನ್ನಡ, ಕನ್ನಡಿಗರ ಶಕ್ತಿ ಹೆಚ್ಚುತ್ತದೆ. ಅದಕ್ಕಾಗಿ ಸರ್ಕಾರ ಕೈಗಾರಿಕಾ ತರಬೇತಿ ಕೇಂದ್ರಗಳು ಹಾಗೂ ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಿದೆ ಎಂದರು.

ರಾಜ್ಯದಲ್ಲಿ ಆರಂಭವಾಗುವ ಉದ್ದಿಮೆಗಳಲ್ಲಿ ಶೇ.75ರಷ್ಟು ಕೌಶಲ್ಯ ವಲಯದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45