BANGALORE URBAN:
ಬೆಂಗಳೂರು: ಸಿಎಎ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ಕಳೆದ 2019ರ ಡಿ.19ರಂದು ನಡೆದಿದ್ದ ಪ್ರತಿಭಟನೆ ವೇಳೆ ನಡೆಸಿದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರ ಸಹಿತ ಘಟನೆಯಲ್ಲಿ ಯಾರೂ ತಪ್ಪಿತಸ್ಥರಲ್ಲ ಎಂದು ಹೇಳಿರುವ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟಿಗೆ ತಿಳಿಸಿದ್ದು, ಈ ಕುರಿತ ಪ್ರಮಾಣಪತ್ರಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಗೋಲಿಬಾರ್ ನಡೆಸಿ ನೌಶೀನ್ ಮತ್ತು ಜಲೀನ್ ಎಂಬಿಬ್ಬರು ಅಮಾಯಕರು ಬಲಿಯಾಗಿದ್ದರು. ಘಟನೆಯಲ್ಲಿ ಪೊಲೀಸರು ಕರ್ತವ್ಯಪ್ರಜ್ಞೆ ಮರೆತು ನಡೆದುಕೊಂಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.