ಈ ಕ್ಷಣ :

ರಾಜ್ಯಪಾಲರನ್ನು ಭೇಟಿಯಾಗಿ ಕೋವಿಡ್‌ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿಎಂ

Published 15 ಮಾರ್ಚ್ 2023, 21:47 IST
Last Updated 4 ಮೇ 2023, 23:29 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN: ಬೆಂಗಳೂರು: ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು. ಕೋವಿಡ್‌ ಕಾರ್ಯಪಡೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ಇನ್ನೊಬ್ಬ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೊಂದಿಗೆ 1.30ಕ್ಕೆ ರಾಜಭವನಕ್ಕೆ ತೆರಳಿದ  ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್‌, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ ಮಾಹಿತಿ ನೀಡಿದರು. ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್‌ ಕೊರತೆಯನ್ನು ನೀಗಿಸಲಾಗಿದೆ ಎಂದು ಡಿಸಿಎಂ ಅವರು ಅಂಕಿ- ಅಂಶಗಳ ಸಮೇತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು. ಬ್ಲ್ಯಾಕ್‌ ಫಂಗಸ್‌ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45