ಈ ಕ್ಷಣ :

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿ ಬೊಮ್ಮಾಯಿ

Published 16 ಮಾರ್ಚ್ 2023, 12:34 IST
Last Updated 4 ಮೇ 2023, 23:29 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN:

ಬೆಂಗಳೂರು: ರಾಜ್ಯದಲ್ಲಿ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದರು.

ಅರಣ್ಯ ನಮಗಿಂತ ಮೊದಲು ಅಸ್ತಿತ್ವದಲ್ಲಿದ್ದ ನೈಸರ್ಗಿಕ ಸಂಪತ್ತು. ಅರಣ್ಯ ನಮ್ಮ ಪೂರ್ವಿಕರು ಎಂಬ ಅಭಿಪ್ರಾಯ ನಮ್ಮಲ್ಲಿದೆ. ಪೂರ್ವಿಕರಿಗೆ ಭಕ್ತಿಭಾವದಿಂದ ನಮನ ಸಲ್ಲಿಸುವಂತೆಯೇ ಗಿಡಮರಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅರಣ್ಯವಿಲ್ಲದೇ ಮನುಷ್ಯನ ಅಸ್ತಿತ್ವವಿರುತ್ತಿರಲಿಲ್ಲ. ಕಾಡಿಗೆ ನಾವು ಸದಾ ಋಣಿಯಾಗಿರಬೇಕು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಮನುಷ್ಯನ ಮೂಲ ಪ್ರಾರಂಭವಾಗಿದ್ದು ಅರಣ್ಯದಲ್ಲಿ.ಈಗ ನಾಗರಿಕತೆ ಬೆಳಿಸಿಕೊಂಡಿದ್ದೇವೆ. ಅರಣ್ಯ ನಾಶಕ್ಕೆ ನಾವು ಎಡೆ ಮಾಡಿಕೊಟ್ಟಿದ್ದೇವೆ. ನೈಸರ್ಗಿಕ ಸಂಪತ್ತಿನ ವಿಚಾರದಲ್ಲಿ ನಮಗೆ ಇರುವ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಕಾಡಿಲ್ಲದೇ ಮಳೆ ಇಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಮನುಷ್ಯನ ಅತಿಯಾಸೆಯಿಂದ ನಿಸರ್ಗ ನಾಶವಾಗುತ್ತಿದೆ. 2000 ವರ್ಷಗಳಲ್ಲಿ ನಾಶವಾಗುವಷ್ಟು ಅರಣ್ಯವನ್ನು ಕೇವಲ 20 ವರ್ಷಗಳಲ್ಲಿ ನಾಶ ಮಾಡಿದ್ದೇವೆ. ಪರಿಸರ ಹಾನಿಯ ವೇಗ ಅಷ್ಟು ತೀವ್ರಗೊಂಡಿದೆ. ಇದು ನಿಜಕ್ಕೂ ಭಯಾನಕವಾದ ಸಂಗತಿ ಎಂದರು.

ಮುಂದಿನ ಜನಾಂಗಕ್ಕಾಗಿ ಅರಣ್ಯ ಸಂರಕ್ಷಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ. ಅವಶ್ಯಕತೆಗಿಂತ ಹೆಚ್ಚು ನಿಸರ್ಗವನ್ನು ನಾಶಪಡಿಸಿದರೆ, ಭವಿಷ್ಯದಿಂದ ಕಳ್ಳತನ ಮಾಡಿದಂತೆ. ನಮ್ಮ ಹಿರಿಯರು ಇದನ್ನು ಉಳಿಸಿದ್ದರಿಂದ ಈ ಸಂಪತ್ತನ್ನು ನಾವು ಅನುಭವಿಸುತ್ತಿದ್ದೇವೆ. ಮುಂದಿನ ಜನಾಂಗದ ಪಾಲನ್ನು ನಾವೇ ಬಳಕೆ ಮಾಡಬಾರದು ಎಂಬ ಅರಿವಿನಿಂದ ಇಲಾಖೆ ಕೆಲಸ ಮಾಡಬೇಕು. ಆಗ ಮಾತ್ರ ಹುತಾತ್ಮರ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

ಅರಣ್ಯ ಸಂರಕ್ಷಣೆಯ ಸಲುವಾಗಿ ಅನೇಕರು ಹುತಾತ್ಮರಾಗಿದ್ದಾರೆ. ರಾಜ್ಯದ 43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯವಿದೆ. ಪ್ರಸ್ತುತ ಶೇ 21.5% ರಷ್ಟು ಅರಣ್ಯದ ಕೊರತೆ ಇದೆ. ಕಾಡುಗಳ್ಳರನ್ನು ನಿಯಂತ್ರಿಸಿ, ಕಾಡು, ಉಳಿಸಿ ಬೆಳೆಸುವ ಕ್ರಮಗಳನ್ನು ಕೈಗೊಳ್ಳಬೇಕು. ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷವನ್ನು ಕಡಿಮೆ ಮಾಡಬೇಕು. ಗಡಿಗಳಲ್ಲಿ ನಾಗರಿಕರೂ ಸಹ ಪ್ರಾಣ ತೆತ್ತಿದ್ದಾರೆ. ಅವರ ಪ್ರಾಣ ಉಳಿಸುವುದೂ ಮುಖ್ಯ. ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು. ಇಲಾಖೆಯ ಕಾರ್ಯಚಟುವಟಿಕೆ ವಿಸ್ತರಿಸಲಿ. ದಕ್ಷತೆಯಿಂದ ಕಾಡನ್ನು ಉಳಿಸುವ ಕೆಲಸವಾಗಲಿ. ಕರ್ತವ್ಯದಲ್ಲಿರುವವರ ಪ್ರಾಣ ಸಂರಕ್ಷಣೆಗೆ ಅಗತ್ಯ ಪರಿಕರಗಳನ್ನು ಒದಗಿಸಬೇಕೆಂದರು ಸಿಎಂ ಬೊಮ್ಮಾಯಿ ತಿಳಿಸಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45