ಈ ಕ್ಷಣ :

2 ತಿಂಗಳಲ್ಲಿ ಪೂರ್ಣಪ್ರಮಾಣದ ಐಬಿಎಂ ಮೈಸೂರು ಕ್ಯಾಂಪಸ್ ಆರಂಭ: ಸಚಿವ ಡಾ.ಅಶ್ವತ್ಥನಾರಾಯಣ

Published 16 ಮಾರ್ಚ್ 2023, 12:42 IST
Last Updated 7 ಮೇ 2023, 01:47 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN:

ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್ ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ ಕ್ಲೈಯಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಾಂಕೇತಿಕವಾಗಿ ಚಾಲನೆ ನೀಡಿದರು.

ವಿಕಾಸಸೌಧದಲ್ಲಿ ಈ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಅತ್ಯಾಧುನಿಕ ಕೇಂದ್ರವು ಮೈಸೂರಿನಿಂದ ತನ್ನ ಚಟುವಟಿಕೆಗಳನ್ನು ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹವು ಮೈಸೂರಿನಲ್ಲೂ ತನ್ನ ಕಚೇರಿಯನ್ನು ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಕ್ಷಿಪ್ರ ಮತ್ತು ಹೈಟೆಕ್ ಆರ್ಥಿಕತೆಯ ಬೆಳವಣಿಗೆಗೆ ನೆರವಾಗಲಿದೆ’ ಎಂದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನಿನ (ಕೆಡಿಇಎಂ) ಸ್ಪೋಕ್-ಶೋರ್ ನೀತಿಯಡಿಯಲ್ಲಿ 2025ರ ಹೊತ್ತಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. 2026ರ ಹೊತ್ತಿಗೆ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ಕ್ಲಸ್ಟರ್ ಗಳಲ್ಲಿ 5 ಸಾವಿರ ಐಟಿ ಕಂಪನಿಗಳು ಮತ್ತು ನವೋದ್ಯಮಗಳು ನೆಲೆಯೂರುವಂತೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಮೈಸೂರಿನಲ್ಲಿ ಐಬಿಎಂ ತನ್ನ ಸಿಐಸಿ ಕೇಂದ್ರವನ್ನು ತೆರೆದಿರುವುದರಿಂದ ರಾಜ್ಯವು ಜಾಗತಿಕ ಮಟ್ಟದ ಡಿಜಿಟಲ್ ಸೇವೆಗಳು ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿಯಲಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, `ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯಡಿ 2025ರ ಹೊತ್ತಿಗೆ ರಾಜ್ಯಕ್ಕೆ ಕನಿಷ್ಠ ಪಕ್ಷ 100 ಕಂಪನಿಗಳ ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್(ಜಿಸಿಸಿ)ಗಳನ್ನು ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಮೈಸೂರು ಸೇರಿದಂತೆ ರಾಜ್ಯದ ಹಲವು ನಗರಗಳು ಅತ್ಯಂತ ತ್ವರಿತ ಗತಿಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಬದಲಾಗುತ್ತಿರುವುದು ಈ ನಿಟ್ಟಿನಲ್ಲಿ ಸಕಾರಾತ್ಮಕ ಹೆಜ್ಜೆಯಾಗಿದೆ’ ಎಂದರು.

ಐಬಿಎಂನ ವ್ಯವಸ್ಥಾಪಕ ಪಾಲುದಾರ ಅಮಿತ್ ಶರ್ಮಾ, ಮೈಸೂರು ಸಿಐಸಿ ಕೇಂದ್ರವು ಭವಿಷ್ಯದ ತಂತ್ರಜ್ಞಾನ ವಲಯಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಮುಖ್ಯ ಪಾತ್ರ ವಹಿಸಲಿದೆ. ಈ ಆರ್ಥಿಕ ವರ್ಷದ ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ 10 ಸಾವಿರ ಜನರನ್ನು ನೇಮಿಸಿಕೊಳ್ಳಲಾಗುವುದು. ಇದರಿಂದಾಗಿ ಐಬಿಎಂ ಕಂಪನಿಯು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ), ಹೈಬ್ರಿಡ್ ಕ್ಲೌಡ್ ಮುಂತಾದ ಕ್ಷೇತ್ರಗಳಲ್ಲಿ ಹೊಂದಿರುವ ಪರಿಣತಿಯು ಮತ್ತಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45