ಈ ಕ್ಷಣ :

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

Published 15 ಮಾರ್ಚ್ 2023, 21:47 IST
Last Updated 4 ಮೇ 2023, 23:29 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN: ರಾಜ್ಯದಲ್ಲಿ ಕೋವಿಡ್‌ 19 ಎರಡನೇ ಅಲೆ ನಿರೀಕ್ಷೆಗೂ ವ್ಯಾಪಿಸುತ್ತಿದೆ. ಈಗಾಗಲೇ ಘೋಷಣೆಯಾಗಿರುವಂತೆ ಜೂ.7ರವರೆಗೆ ಲಾಕ್‌ಡೌನ್‌ ಇರಲಿದ್ದು ಅಲ್ಲಿಯವರೆಗಿನ ಸ್ಥಿತಿಗತಿಗಳನ್ನು ಅವಲೋಕಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಹಾಸನ, ಮೈಸೂರು, ಬೆಳಗಾವಿ, ವಿಜಯಪುರ ಮತ್ತು ಕಲಬುರ್ಗಿ ಸಂಸದರು ಮತ್ತು ಶಾಸಕರ ಜತೆ ವಿಡಿಯೋ ಕಾನ್ಫರೆನ್ಸ್‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಸಿಟೀವ್‌ ಪ್ರಮಾಣ ಶೇ.10ಕ್ಕಿಂತ ಕುಸಿಯುವಂತೆ ಮಾಡಲು ಸೂಚಿಸಲಾಯಿತು. ಮರಣ ಪ್ರಮಾಣ ಶೇ.1.7 ಇದೆ, ಮರಣದ ಸಂಖ್ಯೆ ಕಡಿಮೆಯಾಗಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ.60 ಪ್ರಕರಣಗಳು ವರದಿಯಾಗುತ್ತಿವೆ. ಈ ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸಬೇಕಾಗಿದೆ ಎಂದರು. ಕೆಲ ದಿನಗಳಿಂದ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್‌ ಬದಲು ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವಂತೆ ಮನವೊಲಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್‌ ನಿಯಂತ್ರಣದಲ್ಲಿ ಶಾಸಕರು ಮತ್ತು ಸಂಸದರು ತಮ್ಮ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಚಿಕಿತ್ಸಾ ಸೌಲಭ್ಯಗಳು, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ತಕ್ಕಂತೆ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲೂ ಸಮಸ್ಯೆ ಉದ್ಭವಿಸದಂತೆ ಸಂಪನ್ಮೂಲಗಳ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು. ಪ್ರತೀ ತಾಲೂಕಿಗೆ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮನವಿ ಮಾಡಿದರು. ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ.ಗಳನ್ನು ಕೋವಿಡ್‌ ನಿರ್ವಹಣೆಗೆ ಬಳಕೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೆ ಗ್ರಾಪಂ.ಗಳಿಗೆ ತಲಾ 50 ಸಾವಿರ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45