BREAKING NEWS:
ನವದೆಹಲಿ : ಕಳೆದ 24 ಗಂಟೆಗಳಲ್ಲಿ 2,86,384 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,03,71,500 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,91,700 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 3,06,357 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,73,70,971ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 17,69,745 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,05,72,178 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.