BREAKING NEWS:
ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ದೇಶದಲ್ಲಿ ಇಂದು 58,077 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, 657 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 6,97,802 ಆಗಿದ್ದು, ಸಾವಿನ ಸಂಖ್ಯೆ 5,07,177ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,50,407 ಮಂದಿ ಗುಣಮುಖರಾಗಿದ್ದಾರೆ.
ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 1,67,882 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,11,80,751ಕ್ಕೆ ಏರಿಕೆಯಾಗಿದೆ. ದಿನಂಪ್ರತಿ ಪಾಸಿಟಿವ್ ಸೋಂಕಿತರ ದರ ಶೇಕಡಾ 3.89ರಷ್ಟಾಗಿದೆ.