ಈ ಕ್ಷಣ :

ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ಗ್ರೆನೇಡ್ ದಾಳಿ

Published 16 ಮಾರ್ಚ್ 2023, 14:32 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ​ ನಗರದಲ್ಲಿ ಉಗ್ರರು ಕೈಬಾಂಬ್ (ಗ್ರೆನೇಡ್) ಎಸೆದು ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದಾರೆ.

ಮೃತರು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಯೋತ್ಪಾದಕರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಈ ಆಘಾತಕಾರಿ ಘಟನೆ ನಡೆದಿದೆ.

ಶೋಪಿಯಾನ್​ನ ಹಾರ್ಮೆನ್ ಎಂಬಲ್ಲಿ ಭಯೋತ್ಪಾದಕರು ಕೈಬಾಂಬ್ ಎಸೆದಿದ್ದು, ಉತ್ತರ ಪ್ರದೇಶದ ಕನೌಜ್ ನಿವಾಸಿಗಳಾದ ಮೊನೀಶ್ ಕುಮಾರ್ ಮತ್ತು ರಾಮ್ ಸಾಗರ್ ಎಂಬ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿಯೇ ಅವರು ಕೊನೆಯುಸಿರೆಳೆದರು. ಗ್ರೆನೇಡ್ ಎಸೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ ಎಂದು ಕಾಶ್ಮೀರದ ಪೊಲೀಸರು ಮಂಗಳವಾರ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಕೆಲ ಸಮಯದ ನಂತರ ಮತ್ತೊಂದು ಟ್ವೀಟ್ ಪೋಸ್ಟ್ ಮಾಡಿರುವ ಜಮ್ಮು ಕಾಶ್ಮೀರ ಪೊಲೀಸರು ಪ್ರಕರಣದ ಅಪ್​ಡೇಟ್ ನೀಡಿದ್ದಾರೆ. 'ಶೋಪಿಯಾನ್ ಪೊಲೀಸರು ಗ್ರೆನೇಡ್ ಎಸೆದ ಇಮ್ರಾನ್ ಬಶೀರ್ ಗನಿ ಎಂಬಾತನನ್ನು ಬಂಧಿಸಿದ್ದಾರೆ. ಈತ ನಿಷೇಧಿತ ಲಷ್ಕರ್ ಎ ತಯ್ಯಬಾ ಸಂಘಟನೆಗೆ ಸೇರಿದವನು. ತನಿಖೆ ಮುಂದುವರಿದಿದೆ' ಎಂದು ಪೊಲೀಸರು ಹೇಳಿದ್ದಾರೆ. ಬಾಂಬ್ ಸ್ಫೋಟಗೊಂಡಾಗ ಈ ಕಾರ್ಮಿಕರು ನಿದ್ರಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಚೌಧರಿ ಗುಂಡ್ ಎಂಬಲ್ಲಿ ಇರುವ ತನ್ನ ಮನೆಯ ಸಮೀಪದಲ್ಲೇ ಪೂರನ್ ಕೃಷ್ಣ ಭಟ್ ಎಂಬ ಕಾಶ್ಮೀರಿ ಪಂಡಿತನ ಮೇಲೆ ಅ 15ರಂದು ಗುಂಡಿನ ದಾಳಿ ನಡೆದಿತ್ತು. ಶೋಪಿಯಾನ್​ನಲ್ಲಿ ವಾಸವಾಗಿದ್ದ ಅವರು ಕಾಶ್ಮೀರದಿಂದ ಹೊರಗೆ ಹೋದವರಲ್ಲ ಎಂದು ಸ್ಥಳೀಯರು ಹೇಳಿದ್ದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45