BREAKING NEWS:
ಗುಜರಾತ್ನ ಅಹಮದಾಬಾದ್‌ನಲ್ಲಿಂದು ಕನ್ನಡ ಸಂಘದ 75 ನೇ ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪಾಲ್ಗೊಂಡಿರುವುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ.
ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ಗುಜರಾತ್ನ ಅಹಮದಾಬಾದ್‌ನಲ್ಲಿಂದು ಕನ್ನಡ ಸಂಘದ 75 ನೇ ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪಾಲ್ಗೊಂಡಿರುವುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ ಎಂದು ಅಭಿಪ್ರಾಯ ಪಟ್ಟಿರುವ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ' ಎಂದಿದ್ದಾರೆ.
ಅಹಮದಾಬಾದ್‌ನಲ್ಲಿಂದು ನಡೆದ ಕನ್ನಡ ಸಂಘದ 75ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಮನವಿ ಮಾಡಿದ್ದರು. ಗುಜರಾತ್ ಸಿಎಂ ಗೆ ಮನವಿ ಮಾಡಿದ ಜೋಶಿಯವರು, ಕರ್ನಾಟಕ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಹಾಗು ತಮ್ಮ ವೈಯಕ್ತಿಕ ಸಹಕಾರ ನೀಡುವುದಾಗಿಯೂ ಹೇಳಿದ್ದರು.
ವಾರ್ಷಿಕೋತ್ಸವದಲ್ಲಿ ಮಾತನಾಡಿದ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು, ಗುಜರಾತ್ ನ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತ ಹಲವು ವಿಚಾರಗಳನ್ನು ಹಂಚಿಕೊಂಡು, ಒಂದೆಡೆ ದೇಶದ ಆಜಾದಿ ಕಾ ಅಮೃತ ಮಹೋತ್ಸವ ನಡೆಯುತ್ತಿದೆ.
ಗುಜರಾತ್ ನಲ್ಲಿ ಕನ್ನಡ ಸಂಘದ 75ನೇ ವರ್ಷದ ಸಂಭ್ರಮ ನಡೆಯುತ್ತಿದೆ. ಅಂದಿನ ದಿನಗಳಲ್ಲಿಯೇ ಕನ್ನಡಿಗರು ಗುಜರಾತ್ ರಾಜ್ಯಕ್ಕೆ ಬಂದು, ಇಲ್ಲಿನ ಜನರೊಂದಿಗೆ ಬೆರೆತು, ವ್ಯಾಪಾರ-ವಹಿವಾಟು ನಡೆಸಿ ಗುಜರಾತನ ಏಳಿಗೆಗೆ ಕೊಡುಗೆಗಳನ್ನು ನೀಡಿದ್ದಾರೆ. ಇದು ಶ್ಲಾಘನೀಯ ಕಾರ್ಯ.