BREAKING NEWS:
ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಒಗ್ಗಟ್ಟಾಗಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಸಹಕಾರ ನೀಡುವಂತೆ ಬ್ರಿಕ್ಸ್ ಸದಸ್ಯ ರಾಷ್ಟ್ರಗಳನ್ನು ಕೋರಿದರು.
ತಾಲಿಬಾನ್ಗಳ ಭಯೋತ್ಪಾದಕ ನಡೆ ಬಗ್ಗೆ ಶೃಂಗಸಭೆಯಲ್ಲಿ ಕಳವಳ ವ್ಯಕ್ತವಾಯಿತು. ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು ಆತಂಕಕಾರಿಯಾಗಿದ್ದು, ತಾಲಿಬಾನಿಗಳೊಂದಿಗಿನ ಚೀನಾ ಮತ್ತು ಪಾಕ್ ನಂಟು ತರಬಹುದಾದ ಅಪಾಯದ ಬಗ್ಗೆ ಶೃಂಗಸಭೆಯಲ್ಲಿ ಪ್ರಸ್ತಾಪವಾಯಿತು.
ಐದು ರಾಷ್ಟ್ರಗಳ ಈ ವರ್ಚುವಲ್ ಶೃಂಗಸಭೆಯಲ್ಲಿ ಬ್ರೆಝಿಲ್ ಅಧ್ಯಕ್ಷ ಜೈರ್ ಬೋಲ್ಸೆನಾರೊ, ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಕ್ಷಿ ಜಿಂಗ್ಪಿನ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ರಾಮಾಫೋಸಾ ಭಾಗವಹಿಸಿದ್ದರು.