BREAKING NEWS:
ಬೆಂಗಳೂರು : ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಅನ್ ಲಾಕ್ 4.0 ಜಾರಿಗೆ ಬರಲಿದ್ದು, ಸಿನಿಮಾ ಮಂದಿರಗಳು, ಪದವಿ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರಗಳ ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕೋವಿಡ್ 19 ಅನ್ ಲಾಕ್ 4.0 ಜಾರಿ ಕುರಿತು ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ನೈಟ್ ಕರ್ಪ್ಯೂ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ ವಿಧಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜುಲೈ 26 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಮೊದಲ ಕೊರೊನಾ ಲಸಿಕೆ ಕಡ್ಡಾಯ ಮಾಡಲಾಗಿದೆ. ಜುಲೈ 26 ರಿಂದ ಪದವಿ ತರಗತಿಗಳು ಆಫ್ ಲೈನ್ ಕ್ಲಾಸ್ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಬಾರ್ ಗಳಲ್ಲಿ ಮಾತ್ರ ಮದ್ಯ ಸೇವನೆಗೆ ಇದ್ದ ಶೇ.50 ರ ಮಿತಿ ಮುಂದುವರಿಕೆಯಾಗಿದೆ. ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಕಡಿತ ಹಿನ್ನೆಲೆಯಲ್ಲಿ ಬಾರ್ ಗಳಲ್ಲಿ ಇನ್ಮುಂದೆ ರಾತ್ರಿ 10 ತನಕ ಮದ್ಯ ಸೇವನೆಗೆ ಅವಕಾಶ ದೊರೆಯಲಿದೆ. ಇನ್ನು ಪಬ್ ಗಳಲ್ಲಿ ಮದ್ಯ ಸೇವನೆ, ನೈಟ್ ಪಾರ್ಟಿಗಳಿಗೆ ಅವಕಾಶ ಇಲ್ಲ.