BREAKING NEWS:
ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಬ್ಯಾಟಿಂಗ್ ನಲ್ಲಿ ತಮ್ಮ ಎಂದಿನ ಲಯವನ್ನು ಕಂಡುಕೊಂಡಿರುವ ವಿರಾಟ್, ಟಿ20 ವಿಶ್ವಕಪ್ ನಲ್ಲಿ ಅಬ್ಬರಿಸಿದ್ದರು.
ಈ ಬಾರಿಯ ಟಿ20 ವಿಶ್ವಕಪ್ ನ ಆರು ಇನ್ನಿಂಗ್ಸ್ ನಲ್ಲಿ ವಿರಾಟ್ 296 ರನ್ ಗಳನ್ನು ಗಳಿಸಿದ್ದು, ಅದರಲ್ಲೂ ಟೀಮ್ ಇಂಡಿಯಾ ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಕೇವಲ 53 ಬಾಲುಗಳಲ್ಲಿ ಅಜೇಯ 82 ರನ್ ಸಿಡಿಸಿದ್ದರು.
ಇದೀಗ ವಿರಾಟ್ ಕೊಹ್ಲಿ ಮತ್ತೊಂದು ಹೆಗ್ಗಳಿಕೆ ಹೊಂದಿದ್ದು, ಸೋಶಿಯಲ್ ಮೀಡಿಯಾ ವೇದಿಕೆಗಳಾದ ಟ್ವಿಟ್ಟರ್ ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ಐವತ್ತು ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದ ಮೂರೂ ವೇದಿಕೆಗಳಲ್ಲಿ ಐವತ್ತು ಮಿಲಿಯನ್ ಫಾಲೋವರ್ಸ್ ಹೊಂದಿರುವ ಮೊದಲ ಕ್ರಿಕೆಟರ್ ಎಂಬ ಕೀರ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.