ಈ ಕ್ಷಣ :

ಯೋಗವು ಯಾವುದೇ ದೇಶ-ಧರ್ಮಕ್ಕೆ ಸೀಮಿತವಲ್ಲ: ನಿರ್ಮಲಾನಂದ ನಾಥ ಸ್ವಾಮೀಜಿ

Published 15 ಮಾರ್ಚ್ 2023, 22:38 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS: ಬೆಂಗಳೂರು: ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ ಎಂದು ನಿರ್ಮಲಾನಂದ ನಾಥ ಸ್ವಾಮೀಜಿ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್‌ ವಿಜ್ಞಾನಿ ಲಾವಾಶಿಯರ್‌ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು. ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ: ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ʼಕಟ್ಟಿ ಚಕ್ರಾಸನʼ, ʼತ್ರಿಕೋನಾಸನʼ, ʼಊರ್ಧ್ವ ತಾಡಾಸನʼ, ʼಪಾದ ಹಸ್ತಾಸನʼ, ʼಉಸ್ಟ್ರಾಸನʼ, ʼಶಶಾಂಕಾಸನʼ, ʼಮಂಡೂಕಾಸನʼ, ʼಮಕರಾಸನʼ, ʼಭುಜಂಗಾಸನʼ, ʼಬಾಲ ಕ್ರೀಡಾಸನʼ, ʼಶಲ್ಬಾಸನʼ, ʼಉತ್ಥಾನ ಪಾದಾಸನʼ, ʼಅರ್ಧಪವನ ಮುಕ್ತಾಸನʼ, ʼಪವನ ಮುಕ್ತಾಸನʼ ಜತೆಗೆ, ʼಕಪಾಲಬಾತಿʼ, ʼಪ್ರಾಣಯಾಮʼ, ʼನಾಡಿ ಶೋಧನʼ, ʼಶೀಥಲಿ ಪ್ರಾಣಯಾಮʼ, ʼಭ್ರಾಮರಿ ಪ್ರಾಣಯಾಮʼ ಮಾಡಿಸಿದರು.‌ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ : ಅಶ್ವತ್ಥನಾರಾಯಣ ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. "ಮನುಕುಲದ ಮಾನಸಿಕ- ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿ" ಎಂದರು. ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜತೆಗೆ, ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45