BUSINESS:
ನವದೆಹಲಿ: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸುತ್ತಿರುವ ಬಜೆಟ್ ಬಜೆಟ್ ಪ್ರತಿಯನ್ನು ಶೀಘ್ರವೇ ರಾಜ್ಯಸಭೆಯಲ್ಲಿ ಸದಸ್ಯರಿಗೆ ವಿತರಣೆಯಾಗಲಿದೆ. 2022-23ರ ಕೇಂದ್ರ ಬಜೆಟ್ ಗೆ ಮಂಗಳವಾರ ಬೆಳಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಕೊರೋನಾ ಸಾಂಕ್ರಾಮಿ ರೋಗ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ, ನಿರುದ್ಯೋಗ ಹೆಚ್ಚಳ, ಕೃಷಿ ಉದ್ಯಮ, ರಫ್ತು, ವಾಹನೋದ್ಯಮ ಸೇರಿದಂತೆ ಪ್ರತಿಯೊಂದು ವಲಯವೂ ಋಣಾತ್ಮಕ ಬೆಳವಣಿಗೆ ದಾಖಲಿಸಿದ್ದು, ಸಾಲು ಸಾಲು ಸವಾಲುಗಳ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.