DISTRICT:
ಹಾವೇರಿ: ಹಲ್ಲಿ ಬಿದ್ದ ಆಹಾರ ಸೇವಿಸಿ 89 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡದಲ್ಲಿ ನಡೆದಿದೆ.
ವೆಂಕಟಾಪುರ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಹಲ್ಲಿ ಬಿದ್ದಿದ್ದ ಮಧ್ಯಾಹ್ನದ ಬಿಯೂಟವನ್ನು ಸೇವಿಸಿ ಸುಮಾರು 89 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ರಾಣೆಬೆನ್ನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಊಟ ಸೇವಿಸಿದ ನಂತ್ರ 89ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥಗೊಂಡಿದ್ದಾರೆ. ವಿಷಯ ತಿಳಿದು ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಶಾಲಾ ಶಿಕ್ಷಕರು ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ