DISTRICT:
ಯಾದಗಿರಿ: ಅತ್ಯಾಚಾರಕ್ಕೆ ನಿರಾಕರಿಸಿದ ಮಹಿಳೆಯನ್ನ ಪೆಟ್ರೋಲ್ ಹಾಕಿ ಸುಟ್ಟು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಕೂಡಲೇ ಬಂಧನ ಮಾಡಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕೆಂದು ಒತ್ತಾಯಿಸಿ, ಮೃತ ಮಹಿಳೆಯ ಶವವಿಟ್ಟು ಸುರಪುರದಲ್ಲಿ ದಲಿತ ಸಂಘಟನೆಗಳು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸುರಪುರ ನಗರದ ಗಾಂಧಿ ವೃತ್ತದಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತದೆ.ಮೊನ್ನೆ ರಾತ್ರಿ ಸುರಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ಪಾಲಮ್ಮ ಎಂಬ ಮಹಿಳೆ ಮೇಲೆ ಅದೇ ಗ್ರಾಮದ ಗಂಗಪ್ಪ ಎಂಬ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಇದಕ್ಕೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದಳು, ಇದರಿಂದಾಗಿ ಗಂಗಪ್ಪ ಆಕೆಯ ಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದ, ಇತ್ತ ಪಾಲಮ್ಮ ಸಹ ಚಿಕಿತ್ಸೆ ಫಲಕಾರಿಯಾಗದೆ ಕಲಬುರಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಸದ್ಯ ಆರೋಪಿ ಗಂಗಪ್ಪನ್ನು ಸುರಪುರ ಪೊಲೀಸರು ಬಂಧನ ಮಾಡಿದ್ದಾರೆ. ಆದರೆ ಇದು ಕುಟುಂಬಸ್ಥರ ಸಮಾಧಾನ ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧನ ಮಾಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದೆ.