DISTRICT: ಬಾಗಲಕೋಟೆ: ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಹಾಗೂ ದಿನ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಾದಾಮಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.ನಗರದ ಪೆಟ್ರೋಲ್ ಬಂಕ್ ಎದುರಿಗೆ ಮುಖಂಡರಿಂದ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿಭಟಿಸಿ, ಬೆಲೆಯೇರಿಕೆ ಖಂಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ (ಹಿಂ.ವ.ವಿ) ರಾಜ್ಯ ಕಾರ್ಯದರ್ಶಿ ಮಹೇಶ ಎಸ್ ಹೊಸಗೌಡ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಡಿ ಯಲಿಗಾರ ಪುರಸಬೆ ಸದಸ್ಯ ಆರ್ ಎಫ್ ಬಾಗವಾನ ಮುಖಂಡ ಎಸ್ ಡಿ ಜೋಗಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಮ್ ಜಿ ಕಿತ್ತಲಿ ಪುರಸಭೆ ಅಧ್ಯಕ್ಷ ಮಂಜುನಾಥ ಹೊಸಮನಿ, ಮುಖಂಡ ಎಮ್ ಎಮ್ ಗಾರವಾಡ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯ ಹೊರಪೇಟ, ಮುಖಂಡ ಮಹಾಂತೇಶ ಹಟ್ಟಿ ರಜಾಕ ರಾಜೂರ ಕಮ್ಮಾರ ಮುಖಂಡ ಸಾಬಣ್ಣ ಹೊಸಗೌಡ್ರ ರಾಜಾಪೂರ ಪರಶುರಾಮ ರೋಣದ ಅವರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.