DISTRICT: ಬಾಗಲಕೋಟೆ: ಸಿದ್ದರಾಮಯ್ಯನವರು ಬಾಗಲಕೋಟೆ ಮತಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸುತ್ತೇನೆಂದು ಬಾಗಲಕೋಟೆ ಮತಕ್ಷೇತ್ರದ ಮಾಜಿ ಶಾಸಕ ಎಚ್ ವೈ ಮೇಟಿ ಹೇಳಿದರು. ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಚಾಮರಾಜಪೇಟೆಯಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ನಾನು ಕಳೆದ ಬಾರಿಯೂ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸಿದ್ದೆ. ಈ ಬಾರಿಯೂ ಬಾಗಲಕೋಟೆ ಮತಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸುವೆ ಎಂದರು. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಗೊತ್ತಿಲ್ಲ. ನಾನು ಆಹ್ವಾನಿಸುವೆ ಎಂದರು.