DISTRICT: ಬಾಗಲಕೋಟೆ: ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಬಾಗಲಕೋಟೆ ನಗರಸಭೆಯಿಂದ ದಿನಸಿ ಕಿಟ್ ಗಳನ್ನು ಶಾಸಕ ವೀರಣ್ಣ ಚರಂತಿಮಠ ವಿತರಿಸಿದರು. ಬಾಗಲಕೋಟೆ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದಿನಸಿ ಕಿಟ್ ವಿತರಿಸಿದರು. ಲಸಿಕೆ ಹಾಕಿಸಿಕೊಂಡ ಬಳಿಕವೂ ಮಾಸ್ಕ್ ಹಾಕಿಕೊಳ್ಳುವದನ್ನು ಮರೆಯಬಾರದು ಎಂದು ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದರು. ನಗರಸಭೆಯಿಂದ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿದ್ದು ಶ್ಲಾಘನೀಯವಾಗಿದೆ.ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ,ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ,ಆಯುಕ್ತ ಮುನಿಶಾಮಪ್ಪ ಸೇರಿದಂತೆ ನಗರಸಭೆ ಸದಸ್ಯರು ಇದ್ದರು. ಸಾಮಾಜಿಕ ಅಂತರದೊಂದಿಗೆ ಪೌರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. [video width="640" height="352" mp4="http://24x7livekannada.com/wp-content/uploads/2021/06/dinii.mp4"][/video]