DISTRICT:
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ರೋಣ ಪಟ್ಟಣದ ಬಳಿ ನಡೆದಿದೆ.
ಮೃತರುಗಳು ಗದಗದ ನಿವಾಸಿಗಳಾಗಿದ್ದು, ಮೃತರದಲ್ಲಿ ಓರ್ವನ ಹೆಸರು ದರ್ಶನ್ ಎಂದು ತಿಳಿದುಬಂದಿದೆ. ಗಾಯಾಳು ಮುಲ್ಲಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಉಳಿದವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ರೋಣ ಪಟ್ಟಣದಿಂದ ಗದಗ ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಓವರ್ ಟೇಕ್ ಮಾಡೋ ಭರದಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರೋಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.