ಈ ಕ್ಷಣ :

ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಬೊಮ್ಮಾಯಿ ಎಚ್ಚರಿಕೆ

Published 16 ಮಾರ್ಚ್ 2023, 13:04 IST
Last Updated 6 ಮೇ 2023, 13:22 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಹಾವೇರಿ : ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ, ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನು ಪ್ರತಿ ಭಾರತೀಯನೂ ಅತ್ಯಂತ ಕಠಿಣ ಶಬ್ಧಗಳಲ್ಲಿ ಖಂಡಿಸಬೇಕು. ದೇಶಕ್ಕಾಗಿ ದೊಡ್ಡ ಸೇನೆಯನ್ನು ಮುನ್ನಡೆಸಿ ರಕ್ಷಣೆ ಮಾಡುತ್ತಿದ್ದವರ ಬಗ್ಗೆ, ಆ ಹುದ್ದೆಯ ಘನತೆಯ ಕುರಿತು ಪರಿಕಲ್ಪನೆ ಇಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ಟ್ವೀಟ್ ಮಾಡಿರುವವರ ಕೃತ್ಯಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್, ಟ್ವೀಟ್ ಮಾಡಿರುವವರ ವಿಳಾಸವನ್ನು ಪತ್ತೆ ಮಾಡಿ ಕೂಡಲೇ ಪ್ರಕರಣ ದಾಖಲು ಮಾಡಿ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಈ ವಿಕೃತಿಯನ್ನು ಕ್ಷಮಿಸುವ ಮಾತಿಲ್ಲ. ಖಂಡಿತವಾಗಿ ಶಿಕ್ಷೆ ಆಗಲೇಬೇಕು ಎಂದರು.

ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿರುವ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಕನ್ನಡನಾಡಿನ ಪರವಾಗಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಅರ್ಪಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮ್ಯಾಂಡ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು, ಅತ್ಯುತ್ತಮ ಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಬೆಳಗಾವಿ ಅಧಿವೇಶನ:

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದರು.

ಹಕ್ಕಿಜ್ವರ:

ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45