DISTRICT:
ಧಾರವಾಡ: ನವೆಂಬರ್ 26ರಂದು ನಡೆಯಬೇಕಿದ್ದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿಯಮ ಬಾಹಿರ ಸ್ಪರ್ಧೆ ವಿರುದ್ಧ ರಿಟ್ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಹಿಂದೆ ಕಸಪಾ ಅಧ್ಯಕ್ಷರಾಗಿದ್ದ ಲಿಂಗರಾಜ ಅಂಗಡಿಯವರು ಈಗಾಗಲೇ ಎರಡು ಅವಧಿ ಅಧ್ಯಕ್ಷರಾಗಿದ್ದು, ಮತ್ತೆ ಮೂರನೇ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿರುವುದನ್ನು ಪ್ರಶ್ನಿಸಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗರಾಜ ಕಿರಣಗಿಯವರು ಧಾರವಾಡ ಹೈ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಎರಡು ಬಾರಿ ಅಧ್ಯಕ್ಷರಾಗಿದ್ದ ಅಂಗಡಿ ಅವರು 3ನೇ ಸಲ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದು, ನಿರಂತರ 2 ಸಲ ಸ್ಪರ್ಧಿಸದಂತೆ ಇರುವ ಕಸಾಪ ನಿಯಮ ಉಲ್ಲಂಘಿಸಿ 3ನೇ ಬಾರಿಯೂ ಅಂಗಡಿಯರ ಸ್ಪರ್ಧಿ ಮಾಡಿರುವ ಕುರಿತು ನಾಗರಾಜ ಕಿರಣಗಿ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ.
ಚುನಾವಣಾ ಅಧಿಕಾರಿಗಳ ನಡೆಯಿಂದ ಬೇಸತ್ತು ನಾಗರಾಜ ಕಿರಣಗಿಯವರು ಹೈಕೋರ್ಟ್ ಮೊರೆ ಹೋಗಿದ್ದರು. ಕಿರಣಗಿ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ಅಧ್ಯಕ್ಷ ಸ್ಥಾನದ ಚುನಾವಣೆಗೆ ಈಗ ತಡೆಯಾಜ್ಞೆ ನೀಡಿ ಆದೇಶ ಮಾಡಿದೆ