DISTRICT:
ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಸುರಿದ ಬಾರಿ ಮಳೆಯಿಂದ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿದು ರಸ್ತೆಗೆ ದೊಡ್ಡ ಕಲ್ಲು ಮಣ್ಣು ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ನಂದಿ ಬೆಟ್ಟದ ಮೇಲೆ ಇರುವ ರಂಗಪ್ಪ ಸರ್ಕಲ್ ಬಳಿ ಗುಡ್ಡ ಕುಸಿತ ಉಂಟಾಗಿದ್ದು ನಿನ್ನೆ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು ಕಲ್ಲು ಮತ್ತು ಮಣ್ಣು ರಸ್ತೆಗೆ ಬಿದ್ದಿದ್ದರಿಂದ ರಸ್ತೆ ಬಂದ್ ಆಗಿದೆ, ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ವಿಶ್ವ ವಿಖ್ಯಾತ ಗಿರಿಧಾಮ ನಂದಿ ಬೆಟ್ಟ ವೀಕ್ಷಿಸಲು ಪ್ರತಿನಿತ್ಯ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಬೆಟ್ಟದಲ್ಲಿ ಗುಡ್ಡ ಕುಸಿದ ಪರಿಣಾಮ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದ್ದರಿಂದ ಇಂದು ಬೆಳಿಗ್ಗೆ ಬಂದ ಪ್ರವಾಸಿಗರು ನಿರಾಸೆಯಿಂದ ವಾಪಸ್ಸು ಹೋಗುತ್ತಿದ್ದಾರೆ. ಪೋಲಿಸರು ಪ್ರವಾಸಿಗರನ್ನು ಚೆಕ್ ಪೋಸ್ಟ್ ನಿಂದಲೇ ವಾಪಸ್ಸು ಕಳಿಸುತ್ತಿದ್ದಾರೆ.