ಈ ಕ್ಷಣ :

ಸಂಪೂರ್ಣ ಲಾಕ್‌ಡೌನ್‌: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈರಾಣಾದ ಜನ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಮೇ.20ರಿಂದ 28ರವರೆಗೆ ಸತತವಾಗಿ ಎಂಟು ದಿನಗಳವರೆಗೆ ಮೆಡಿಕಲ್‌,ಹಾಲು ಮಾರಾಟ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಜಿಲ್ಲಾಡಳಿತ ಸಂಪೂರ್ಣ ಮುಚ್ಚುವಂತೆ ಲಾಕ್‌ಡೌನ್‌ ವಿಧಿಸಿದ್ದು ಇದರಿಂದ ಜಿಲ್ಲೆಯ ಜನ ಹೈರಾಣಾಗಿದ್ದಾರೆ. ಮೇ.20ರಂದು ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಎಂದು ಜಿಲ್ಲಾಡಳಿತ ಘೋಷಿಸಿತ್ತು. ಇನ್ನೇನು 24ರ ನಂತರ ಅಂಗಡಿ ಮುಂಗಟ್ಟುಗಳ ತೆರೆದುಕೊಳ್ಳಲಿದೆ ಎಂದು ನಿಟ್ಟುಸಿರಾಗಿದ್ದ ಜನರಿಗೆ ಮತ್ತೆ ಶಾಕ್‌ ಎದುರಾಯ್ತು. 28ವರೆಗೆ ಲಾಕ್ಡೌನ್‌ ಮುಂದುವರಿಸಿರುವ ಜಿಲ್ಲಾಡಳಿತಕ್ಕೆ ಈಗ ಜನ ಹಿಡಿಶಾಪ ಹಾಕುವಂತಾಗಿದೆ.  ಜನರಿಗೆ ಮನವರಿಕೆಯಾಗುವಂತೆ ಸೂಕ್ತ ಪ್ರಚಾರವಿಲ್ಲದೆ ಏಕಾಏಕಿ ಸಂಪೂರ್ಣ ಲಾಕ್‌ಡೌನ್‌ ಮುಂದುವರಿಸುತ್ತಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗೆ ಸತತ ಎಂಟು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಬದಲಿಗೆ ನಡುವೆ ಎರಡು ದಿನಗಳ ಬಿಡುವು ಕೊಟ್ಟಿದ್ದರೆ ಅಗತ್ಯ ವಸ್ತುಗಳನ್ನು ಖರೀದಿಸಲು ಜನರಿಗೆ ಅನುಕೂಲವಾಗುತ್ತಿತ್ತು. ತರಕಾರಿ ಮಾರಾಟ ಮಾಡುವವರು ತಳ್ಳುಗಾಡಿಗಳಲ್ಲಿ ಸಂಚರಿಸಬೇಕು. ದಿನಸಿ ಅಂಗಡಿಗಳು ಹೋಂ ಡೆಲಿವರಿ ಆರ್ಡರ್‌ ಪಡೆದು ಮನೆಮನೆಗೆ ಅಗತ್ಯ ವಸ್ತುಗಳನ್ನು ತಲುಪಿಸಬೇಕೆಂಬ ನಿಯಮ ಹೇರಲಾಗಿದೆ. ಯಾರೂ ವಾಹನಗಳಲ್ಲಿ ಸಂಚರಿಸುವಂತಿಲ್ಲ. ಔಷಧಿ ಮತ್ತು ಹಾಲು ತರಲು ಕಾಲ್ನಡಿಗೆಯಲ್ಲೇ ಸಾಗಬೇಕು. ಈ ಅವೈಜ್ಞಾನಿಕ ನಿಯಮಗಳಿಂದಾಗಿ ಬಡವರ್ಗದ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.ಎಷ್ಟೋ  ಜನರ ಕೈಯಲ್ಲಿ ಸ್ಮಾರ್ಟ್‌ ಫೋನ್‌ಗಳಿಲ್ಲ. ಇದ್ದರೂ ಆನ್‌ಲೈನ್‌ನಲ್ಲಿ ವ್ಯವಹಾರ ಬಲ್ಲವರೆಷ್ಟಿದ್ದಾರೆ? ಹೀಗಾಗಿ ಈ ಲಾಕ್‌ಡೌನ್‌ನಿಂದ ಜನರಿಗೆ ತೀವ್ರ ಅನಾನುಕೂಲವಾಗಿದೆ. ಪ್ರಚಾರವೆಂದರೆ ಕೇವಲ ವಾಟ್ಸಾಪ್‌,ಸಾಮಾಜಿಕ ಜಾಲತಾಣಗಳಿಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಎಷ್ಟೋ ಮಂದಿ ಲಾಕ್‌ಡೌನಿನ ನಿಯಮಾವಳಿ ತಿಳಿಯದೆ ರಸ್ತೆಗೆ ಇಳಿಯುತ್ತಿದ್ದಾರೆ. ಜನ ರಸ್ತೆಗಿಳಿಯುವುದನ್ನೇ ಕಾದು ಕುಳಿತ ಅಧಿಕಾರಿಗಳ ತಂಡದವರು ಜನರ ಮೇಲೆ ಲಾಠಿ ಬೀಸಿ ನಿಯಂತ್ರಿಸತೊಡಗಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45